ಶಿರಸಿ: ತಾಲೂಕಿನ ಬೆಣ್ಣೆಹೊಳೆಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಕಣ್ಮರೆಯಾಗಿದ್ದಾರೆ.
ರಜೆಯ ನಿಮಿತ್ತ ಹಳ್ಳದಲ್ಲಿ ಈಜಲು ಹೋಗಿದ್ದರು ಎನ್ನಲಾಗಿದ್ದು ಕಾಣೆಯಾದ ಇಬ್ಬರು ಶಿರಸಿ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳೆಂದು ತಿಳಿದು ಬಂದಿದೆ. ನಾಲ್ವರು ವಿದ್ಯಾರ್ಥಿಗಳು ಹೋಗಿದ್ದು ಇಬ್ಬರು ಕಣ್ಮರೆಯಾಗಿದ್ದಾರೆ. ಕಾಣೆಯಾದ ವಿದ್ಯಾರ್ಥಿಗಳ ಪತ್ತೆಗಾಗಿ ಪೊಲೀಸ್ ಅಗ್ನಿಶಾಮಕ ಹಾಗೂ ಸಂಬಂಧಿಸಿದ ಇಲಾಖೆಗಳು ತೀವ್ರಶೋಧ ನಡೆಸುತ್ತಿವೆ. ಶಿರಸಿ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರಗಳು ತಿಳಿದು ಬರಬೇಕಿದೆ.