ಕಾರವಾರ:ನಗರದ ಅಮೃತ ಓರಾ ಹೋಟೆಲ್ ನಲ್ಲಿ ರಷ್ಯಾ ಮೂಲದ ವ್ಯಕ್ತಿಯೊಬ್ಬ ಮೇಲ್ಛಾವಣಿಯಿಂದ ಬಿದ್ದು ಗಂಭೀರಗಾಯಗೊಂಡಿರುವ ಘಟನೆ ಸೋಮವಾರ ತಡರಾತ್ರಿ ವೇಳೆ ನಡೆದಿದೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇವಾನ್ ಡೆನೆವಾ (40) ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ, ಅವರು ಕದಂಬ ನೌಕಾನೆಲೆಯಲ್ಲಿ ಕೆಲಸಕ್ಕಾಗಿ ಕಾರವಾರಕ್ಕೆ ಬಂದಿದ್ದರು. ರಾತ್ರಿ ವೇಳೆಯಲ್ಲಿ ಹೋಟೆಲ್‌ನ ಬಾಲ್ಕನಿಯಲ್ಲಿ ನಿಂತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆಂದು ಹೇಳಲಾಗಿದೆ. ಈ ಘಟನೆ ಬಳಿಕ ತೀವ್ರ ಗಾಯಗೊಂಡ ಇವಾನ್‌ರನ್ನು ತಕ್ಷಣ ಗೋವಾದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್, ಕಾರವಾರ ನಗರ ಠಾಣೆಯ ಅಧಿಕಾರಿಗಳು ಹಾಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.