ಅಂಕೋಲಾ: ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅಂಕೋಲಾ ಪೊಲೀಸರು ಬಂಧಿತ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹುಬ್ಬಳ್ಳಿ ತಾರಿಹಾಳ ರಾಮನಗರದ ರೋಹಿತ ಪರಶುರಾಮ ವಡ್ಡರ್ (26) ಬಂಧಿತ ಆರೋಪಿ. ತಾಲ್ಲೂಕು ವ್ಯಾಪ್ತಿಯ ಮಾಸ್ತಿಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ ಆರೋಪದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರಿಸಿಕೊಂಡಿದ್ದ. ಆರೋಪಿಯು ಹುಬ್ಬಳ್ಳಿಯ ಮನೆಯಲ್ಲಿರುವುದನ್ನು ಖಚಿತಪಡಿಸಿಕೊಂಡ ಅಂಕೋಲಾ ಪೊಲೀಸರು ಬುಧವಾರ ದಾಳಿ ನಡೆಸಿ ಬಂಧಿಸಿದ್ದಾರೆ. ಸಿಪಿಐ ಚಂದ್ರಶೇಖರ ಮಠಪತಿ ಮಾರ್ಗದರ್ಶನದಲ್ಲಿ ಅಂಕೋಲಾ ಠಾಣೆಯ ಸಿಬ್ಬಂದಿ ಮೋಹನ ಗೌಡ, ರಮೇಶ ತುಂಗಳ, ಶೇಖರ ಸಿದ್ದಿ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.
ಡಾಂಬರನೊಳಗೆ ಸಿಲುಕಿಕೊಂಡು ವಿಲವಿಲ ಒದ್ದಾಡಿದ ಹೆಬ್ಬಾವು ! watch here
https://youtu.be/aJoAueSTU3Q
ಅಂಕೋಲಾ ಸಿಪಿಐ ಮಠಪತಿ ಮಾರ್ಗದರ್ಶನದಲ್ಲಿ ಇತ್ತೀಚಿಗೆ ತನಿಖೆಗಳ ವೇಗ ಚುರುಕಾಗಿದ್ದು ಬೈಕ್ ಕಳ್ಳತನ, ಚಿನ್ನದ ಕಳ್ಳತನದ ಆರೋಪ ಮತ್ತಿತರ ಗಂಭೀರ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.