Flash News
Tuesday, September 01, 2026
Logo Flash News
Tuesday, September 01, 2026
Logo
ಮೀನು ಹಿಡಿಯುವ ವೇಳೆ ಗಾಯಗೊಂಡ ಯುವಕ...ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವು  :

ಮೀನು ಹಿಡಿಯುವ ವೇಳೆ ಗಾಯಗೊಂಡ ಯುವಕ...ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವು :

October 16, 2025   |   Flash News

ಕಾರವಾರ :ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಮೀನುಗಾರ ಯುವಕನೋರ್ವ ದುರಂತವಾಗಿ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ಮಾಜಾಳಿ ದಾಂಡೇಭಾಗದ ನಿವಾಸಿ 24 ವರ್ಷದ ಅಕ್ಷಯ ಅನಿಲ ಮಾಜಾಳಿಕರ್  ಮೃತ ದುರ್ದೈವಿ. ಅಕ್ಟೋಬರ್ 14ರಂದು ಮೀನು ಹಿಡಿಯಲು ಅಕ್ಷಯ ತೆರಳಿದ್ದ. ಸಮುದ್ರದಲ್ಲಿ ಮೀನು ಹಿಡಿಯುವ ವೇಳೆ ಕಾಂಡಿ ಮೀನೊಂದು ಹಾರಿ ಹೊಟ್ಟೆಯ ಕೆಳಭಾಗಕ್ಕೆ ಚುಚ್ಚಿದೆ. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ಎರಡು ದಿನಗಳ ಕಾಲ ಚಿಕಿತ್ಸೆ ಪಡೆದಿದ್ದ ಅಕ್ಷಯನಿಗೆ ಗಾಯದ ಸ್ಥಳದಲ್ಲಿ ಹೊಲಿಗೆ ಹಾಕಿದ ವೈದ್ಯರು ನಂತರ ಡಿಸ್ಟಾರ್ಜ್ ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ
ಗುರುವಾರ ಬೆಳಿಗ್ಗೆ ಅಕ್ಷಯ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ. ಅಕ್ಷಯ ಉತ್ತಮ ಕ್ರೀಡಾಪಟುವಾಗಿದ್ದು, ಆತನ ಸಾವಿಗೆ ಕುಟುಂಬಸ್ಥರು ಹಾಗೂ ಸಂಬಂಧಿಕರು, ಸ್ನೇಹಿತರು ದುಃಖ ವ್ಯಕ್ತಪಡಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾನೆ ಎಂದು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಗೆ ಶಾಸಕ ಸತೀಶ್ ಸೈಲ್ ಹಾಗೂ ವಿಧಾನಪರಿಷತ್ ಶಾಸಕ ಗಣಪತಿ ಉಳ್ವೆಕರ್ ಭೇಟಿ ನೀಡಿದ್ದಾರೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.