Flash News
Monday, August 31, 2026
Logo Flash News
Monday, August 31, 2026
Logo
ಟಿಪ್ಪರ್ ಗೆ ಗುದ್ದಿದ ಟೆಂಪೋ; 12 ಜನರಿಗೆ ಗಾಯ

ಟಿಪ್ಪರ್ ಗೆ ಗುದ್ದಿದ ಟೆಂಪೋ; 12 ಜನರಿಗೆ ಗಾಯ

November 17, 2025   |   Flash News

 

ಕಾರವಾರ: ಅಂಕೋಲಾದಿಂದ ಕಾರವಾರದ ಕಡೆಗೆ ಬರುತ್ತಿದ್ದ ಪ್ರಯಾಣಿಕರ ಟೆಂಪೋವೊಂದು ಬ್ರೇಕ್ ಫೇಲ್ ಆದ ಪರಿಣಾಮ, ಮುಂದೆ ಸಾಗುತ್ತಿದ್ದ ಟಿಪ್ಪರ್‌ಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದು 12 ಜನರು ಗಾಯಗೊಂಡ ಘಟನೆ ಮುದಗಾ ಬಳಿ ನಡೆದಿದೆ. ಮುದಗಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹಂಪ್ ಕಾರಣ ಟಿಪ್ಪರ್ ಚಾಲಕ ತನ್ನ ವಾಹನದ ವೇಗವನ್ನು ಕಡಿಮೆ ಮಾಡಿದ್ದಾರೆ. ಇದೇ ಸಮಯದಲ್ಲಿ ಹಿಂಬದಿಯಿಂದ ಬರುತ್ತಿದ್ದ ಟೆಂಪೋ ಚಾಲಕ ಸಹ ಬ್ರೇಕ್ ಹಾಕಲು ಯತ್ನಿಸಿದ್ದಾನೆ. ಆದರೆ, ಟೆಂಪೋದ ಬ್ರೇಕ್ ಸರಿಯಾಗಿ ಕಾರ್ಯನಿರ್ವಹಿಸದೆ ವಾಹನವು ನಿಯಂತ್ರಣ ತಪ್ಪಿ, ನೇರವಾಗಿ ಟಿಪ್ಪರ್‌ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಟೆಂಪೋದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ರೇಷ್ಮಾ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಉಳಿದ 11 ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.