ಅಂಕೋಲಾ: ರಾಸಾಯನಿಕ ಅನಿಲ ತುಂಬಿರುವ ಟ್ಯಾಂಕರ್ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ ಅನಿಲ ಸೋರಿಕೆಯಾದ ಪರಿಣಾಮ ತಾತ್ಕಾಲಿಕ ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ತಾಲೂಕಿನ ಅಗಸೂರು ನವಗದ್ದೆ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಲಾರಿ ಪಲ್ಟಿಯಾಗಿ ಅನಿಲ ಸೋರಿಕೆ ಆಗುತ್ತಿರುವುದರಿಂದ ಘಟನಾ ಸ್ಥಳದಲ್ಲಿ ಜನ ಮತ್ತು ವಾಹನಗಳ ಸಂಚಾರಕ್ಕೆ ನೀಷೇದ ಹೇರಲಾಗಿದ್ದು ಅಂಕೋಲಾ- ಯಲ್ಲಾಪುರ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಪಲ್ಟಿಯಾಗಿದ್ದು ಚಾಲಕ ಗಾಯಗೊಂಡಿದ್ಥು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿಥೆನಾಲ್ ಅಮೈನ್ ಬ್ರೋಮೈಡ್ ರಾಸಾಯನಿಕ ಅನಿಲ ತುಂಬಿ ಗುಜರಾತ್ ನಿಂದ ಮಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅನಿಲ ಸೋರಿಕೆಯಾಗಿದೆ ಎಂದು ತಿಳಿದು ಬಂದಿದೆ. ಸಂಬಂಧಿಸಿದ ತಾಂತ್ರಿಕ ಪರಿಣಿತರು ಆಗಮಸಿದ ನಂತರ ಟ್ಯಾಂಕರ್ ಮೇಲೆತ್ತುವ ಕೆಲಸ ನಡೆಯಲಿದೆ. ವಾಹನಗಳ ಸಂಚಾರಕ್ಕೆ ತಾತ್ಕಾಲಿಕವಾಗಿ ಹೊಸಕಂಬಿ- ಹಿಲ್ಲೂರು ರಾಜ್ಯ ಹೆದ್ದಾರಿ ಮತ್ತು ಅಗಸೂರು -ಕೊಡಸಣಿ ಮಾರ್ಗದ ಮೂಲಕ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ.
ವರದಿ - ವಿಲಾಸ ನಾಯಕ ಜನಮಾಧ್ಯಮ