Flash News
Monday, August 31, 2026
Logo Flash News
Monday, August 31, 2026
Logo
ನ.23ರಂದು ಹಿಮಾಲಯ ಕಾಲೇಜಿನಲ್ಲಿ ಪ್ರತಿಭಾನ್ವೇಷಣೆ

ನ.23ರಂದು ಹಿಮಾಲಯ ಕಾಲೇಜಿನಲ್ಲಿ ಪ್ರತಿಭಾನ್ವೇಷಣೆ

November 18, 2025   |   Flash News

ಅಂಕೋಲಾ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಅಂದರೆ ಪದವಿ ಪೂರ್ವಶಿಕ್ಷಣಕ್ಕೆ ಅತ್ಯುತ್ತಮ ಅವಕಾಶ ದೊರಕಿಸುವ ನಿಟ್ಟಿನಲ್ಲಿ ಹಿಮಾಲಯ ಪದವಿ ಪೂರ್ವ ಕಾಲೇಜು ಮತ್ತು ವಿದ್ವತ್ ಅಕಾಡೆಮಿ ಮೈಸೂರು- ಮಂಗಳೂರು ವತಿಯಿಂದ ಮೂರನೇ ವರ್ಷದ ಪ್ರತಿಭಾನ್ವೇಷಣೆ ಪರೀಕ್ಷೆ ನವೆಂಬರ್ 23ರಂದು ರವಿವಾರ ಮುಂಜಾನೆ 10 ಗಂಟೆಗೆ ಹಿಮಾಲಯ ಕಾಲೇಜು ಆವರಣದಲ್ಲಿ ನಡೆಯಲಿದೆ.

ಎಸ್. ಎಸ್. ಎಲ್ ಸಿ ಪಠ್ಯಕ್ರಮದ ವಿಜ್ಞಾನ ಗಣಿತ ಮತ್ತು ಇಂಗ್ಲಿಷ್ ವಿಷಯದ ಕುರಿತು ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯಲ್ಲಿ ಭಾಗವಹಿಸಿ ಮೊದಲ ಮೂರು ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಪಿಯುಸಿ ಪ್ರವೇಶದಲ್ಲಿ ಶೇಕಡ 50ರಷ್ಟು ಶುಲ್ಕ ರಿಯಾಯಿತಿ ಅಲ್ಲದೇ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನಗಳಿಸಿದವರಿಗೆ ಸಂಪೂರ್ಣ ಉಚಿತ ಪ್ರವೇಶ, ಶೇಕಡ 90ರಷ್ಟು ಅಂಕ ಗಳಿಸಿದ, ,ಆರ್ಥಿಕವಾಗಿ ದುರ್ಬಲವಾಗಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮತ್ತು ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದವರಿಗೆ ಶೇಕಡ 50ರಷ್ಟು ಶುಲ್ಕ ವಿನಾಯಿತಿ ಇದೆ.

ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಆರಂಭವಾದ ಹಿಮಾಲಯ ಪದವಿ ಪೂರ್ವ ಕಾಲೇಜು ಉತ್ತರ ಕನ್ನಡದ ಪ್ರತಿಷ್ಠಿತ ಹಾಗೂ ಉತ್ತಮ ಫಲಿತಾಂಶ ನೀಡುವ ಕಾಲೇಜ್ ಆಗಿ ಗುರುತಿಸಿಕೊಂಡಿದ್ದು ವಿದ್ಯಾರ್ಥಿಗಳ ಪ್ರತಿಭೆಗೆ ಅವಕಾಶ ಸಲ್ಲಬೇಕು ಎನ್ನುವ ಉದ್ದೇಶದಿಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಯೂರ ಆರ್ ನಾಯಕರ ಸಹಕಾರದಲ್ಲಿ ಪ್ರತಿಭಾನ್ವೇಷಣೆ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ. ಪರೀಕ್ಷೆಯ ದಿನ ಮುಂಜಾನೆ 9:30 ಗಂಟೆಗೆ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಹಾಜರಾಗಬೇಕು. ಹಾಜರಾಗುವ ವಿದ್ಯಾರ್ಥಿಗಳಿಗೆ ಅಂಕೋಲಾ ಮತ್ತು ಗೋಕರ್ಣ ಬಸ್ ನಿಲ್ದಾಣದಿಂದ ಕಾಲೇಜಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ಪರೀಕ್ಷೆಗೆ ಹೆಸರು ನೋಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448526365,  8884191887, 9538729277 ಗೆ ಸಂಪರ್ಕಿಸಲು ಕಾಲೇಜಿನ ಪ್ರಾಚಾರ್ಯ ಎಂ.ಐ ಮಹಾಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.