Flash News
Monday, August 31, 2026
Logo Flash News
Monday, August 31, 2026
Logo
ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ

ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ

December 15, 2025   |   Flash News

ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿಯಿದ್ದ ಏಳು ಮೊಬೈಲ್ ಗಳನ್ನು ಜೈಲು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೈಲು ಅಧಿಕ್ಷಕ ಮಲ್ಲಿಕಾರ್ಜುನ ಕೊಣ್ಣೂರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಕೆಲವು ದಿನಗಳ ಹಿಂದೆ ಉತ್ತಕನ್ನಡ ಜಿಲ್ಲಾ ಜೈಲಿನಲ್ಲಿ ಕೈದಿಗಳಿಂದ ಗಲಾಟೆ ನಡೆದಿತ್ತು. ಗಾಂಜಾ ಕೊಡಲಿಲ್ಲ ಎನ್ನುವ ಕಾರಣಕ್ಕೆ ಜೈಲು ಅಧಿಕಾರಿಗಳ ಮೇಲೆ ಕೈದಿಗಳು ದಾಳಿ ಮಾಡಿದ್ದರು. ಮತ್ತೊಂದು ಪ್ರಕರಣದಲ್ಲಿ ಜೈಲಿನ ಟಿವಿಯನ್ನ ಒಡೆದುಹಾಕಿದ್ದರು. ಈ ಘಟನೆಯೂ ತೀವ್ರ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಜೈಲಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದರು. ಅದರ ಭಾಗವಾಗಿ ಮೊಬೈಲ್ ಮತ್ತಿತರ ಕಾನೂನು ಬಾಹಿರ ವಸ್ತುಗಳ ಸಂಗ್ರಹದ ಬಗ್ಗೆ ನಡೆದಿತ್ತು. ತಪಾಸಣೆ ವೇಳೆ ಏಳು ಮೊಬೈಲ್ ಹಾಗೂ ಚಾರ್ಜರ್ ಪತ್ತೆಯಾಗಿದೆ. ಈ ಸಂಭಂದ ಕಾರವಾರ ನಗರ ಠಾಣೆಗೆ ಜೈಲು ಅಧಿಕಾರಿಗಳು ದೂರಿದ್ದಾರೆ. ಈ ಮೊಬೈಲ್ ಫೋನ್ ಗಳು ಯಾವ ಕೈದಿಗಳಿಗೆ ಸಂಬಂಧಿಸಿದ್ದು ಹಾಗೂ ಇದನ್ನು ಪೂರೈಕೆ ಮಾಡಲು ಸಹಕರಿಸಿದ್ದು ಯಾರು? ಎನ್ನುವ ಕುರಿತು ತನಿಖೆಯಿಂದ ತಿಳಿದು ಬರಬೇಕಿದೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.