ಶಿರಸಿ: ದಕ್ಷಿಣ ಭಾರತದ ಅತಿದೊಡ್ಡ ಜಾತ್ರೆಯೆಂದು ಹೆಗ್ಗಳಿಕೆ ಪಡೆದಿರುವ ಶಿರಸಿ ಮಾರಿಕಾಂಬಾ ಜಾತ್ರೆಯ ದಿನಾಂಕ ಅಂತಿಮಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಪ್ರಸಿದ್ಧ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕ ಸಭೆಯಲ್ಲಿ ಆಡಳಿತ ಮಂಡಳಿ ದಿನಾಂಕದ ಕುರಿತು ಅಧಿಕೃತ ಘೋಷಣೆ ಮಾಡಿದ್ದು, ಮುಂದಿನ ಫೆಬ್ರವರಿ 24ರಿಂದ ಮಾರ್ಚ್ 4ರವರೆಗೆ ಜಾತ್ರಾ ಸಂಭ್ರಮ ನಡೆಯಲಿದೆ. ಜಾತ್ರೆಗೆ ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ವ್ಯಕ್ತವಾಗಿದೆ. ಐತಿಹಾಸಿಕ ಹಾಗೂ ಧಾರ್ಮಿಕ ವೈಭವಕ್ಕೆ ಹೆಸರಾಗಿರುವ ಈ ಜಾತ್ರೆಗೆ ಸಂಬಂಧಿಸಿದ ಸಿದ್ಧತೆಗಳು ಈಗಾಗಲೇ ಆರಂಭಗೊಂಡಿದ್ದು, ವ್ಯವಸ್ಥಾಪಕರು ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.