ಅಂಕೋಲಾ: ಕರ್ನಾಟಕ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025ರ ವಿರುದ್ಧ ತಾಲೂಕು ಬಿಜೆಪಿ ಮಂಡಲದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟಿಸುವ ಎಚ್ಚರಿಕೆ ನೀಡಿದರು. ಉದ್ದೇಶಿತ ವಿಧೇಯಕ ನಾಗರಿಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸಂವಿಧಾನಕ್ಕೆ ವಿರುದ್ಧವಾದದ್ದು. ಸಾಮಾಜಿಕ ಮಾಧ್ಯಮದಲ್ಲಿ ಹಾಸ್ಯ ಅಥವಾ ಟೀಕೆಯನ್ನು ದ್ವೇಷ ಎಂದು ಕರೆದು ಬ್ಲಾಕ್ ಮಾಡಬಹುದು. ಕಾನೂನು ಕ್ರಮ ಕೈಗೊಳ್ಳಬಹುದು. ಪತ್ರಕರ್ತರ ತನಿಖಾ ವರದಿಗಳು ಕೇಸ್ ಹೆಸರಿನ ತೂಗುಗತ್ತಿಯನ್ನು ಎದುರಿಸಬೇಕಾಗಿ ಬರಬಹುದು. ಈ ವಿಧೇಯಕದ ಮೂಲಕ ಸರ್ಕಾರವು ಪ್ರತಿಪಕ್ಷಗಳು ಮತ್ತು ಮಾಧ್ಯಮದ ಮೇಲೆ ನಿಯಂತ್ರಣ ಹೇರುವ, ಹೆದರಿಸುವ ಕೆಲಸ ಮಾಡುತ್ತಿದೆ. ಇದನ್ನು ಬಿಜೆಪಿ ವತಿಯಿಂದ ಖಂಡಿಸುತ್ತೇವೆ ಎಂದು ತಿಳಿಸಿದ ಬಿಜೆಪಿ ಕಾರ್ಯಕರ್ತರು ವಿಧೇಯಕ ಜಾರಿಗೊಳಿಸದಂತೆ ಆಗ್ರಹಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.