Flash News
Monday, August 31, 2026
Logo Flash News
Monday, August 31, 2026
Logo
ಹೆದ್ದಾರಿ ಪೇಂಟಿಂಗ್ ವೇಳೆ ಸಿಲಿಂಡರ್ ಸ್ಫೋಟ : ಕ್ಷಣಾರ್ಧದಲ್ಲಿ ಲಾರಿ ಭಸ್ಮ

ಹೆದ್ದಾರಿ ಪೇಂಟಿಂಗ್ ವೇಳೆ ಸಿಲಿಂಡರ್ ಸ್ಫೋಟ : ಕ್ಷಣಾರ್ಧದಲ್ಲಿ ಲಾರಿ ಭಸ್ಮ

January 02, 2026   |   Flash News

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ–63ರ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ಹೆದ್ದಾರಿ ಪೇಂಟಿಂಗ್ ಕಾರ್ಯ ನಡೆಯುತ್ತಿದ್ದ ವೇಳೆ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡ ಆತಂಕಕ್ಕೆ ಕಾರಣವಾಯಿತು. ಪೇಂಟಿಂಗ್‌ಗೆ ಬಳಸುತ್ತಿದ್ದ ಬಾಯ್ಲರ್ ಅತಿಯಾಗಿ ಬಿಸಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು, ಲಾರಿಯಲ್ಲಿ ಇರಿಸಿದ್ದ  ಸಿಲಿಂಡರ್ ಸ್ಫೋಟಗೊಂಡಿದೆ. ಲಾರಿ ಸಂಪೂರ್ಣವಾಗಿ ಹೊತ್ತಿ ಉರಿದು ಸುಟ್ಟು ಕರಕಲಾಗಿದೆ.

ಸಿಲಿಂಡರ್ ಸ್ಫೋಟದೊಂದಿಗೆ ಬೆಂಕಿಯ ಜ್ವಾಲೆಯ ಜೊತೆ ಕಪ್ಪು ಹೊಗೆ ಆಕಾಶಕ್ಕೆ ಚಿಮ್ಮಿದಂತೆ ಕಂಡುಬಂದಿದ್ದು, ಸ್ಥಳದಲ್ಲಿ ಕೆಲಕಾಲ ಗಾಬರಿಯ ವಾತಾವರಣ ನಿರ್ಮಾಣವಾಯಿತು. ಆದರೆ ಕಾರ್ಮಿಕರು ತಕ್ಷಣವೇ ಸ್ಥಳದಿಂದ ದೂರ ಸರಿದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಂಚಾರವನ್ನು ನಿಯಂತ್ರಿಸಿ ಪರಿಸ್ಥಿತಿಯನ್ನು ಸುಗಮಗೊಳಿಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ತ್ವರಿತವಾಗಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರಾದರೂ, ಬೆಂಕಿಯ ತೀವ್ರತೆಗೆ ಲಾರಿಯನ್ನು ಉಳಿಸಲು ಸಾಧ್ಯವಾಗಲಿಲ್ಲ.

ಘಟನೆ ನಡೆದ ಸಂದರ್ಭದಲ್ಲಿ ಸ್ಥಳೀಯರು ಮತ್ತು ಕಾರ್ಮಿಕರಲ್ಲಿ ಆತಂಕ ಮೂಡಿದರೂ, ಬಳಿಕ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಹಾಗೂ ಒಟ್ಟಾರೆ ನಷ್ಟದ ಅಂದಾಜು ಕುರಿತು ಹೆಚ್ಚಿನ ವಿವರಗಳು ತನಿಖೆಯ ಬಳಿಕ ತಿಳಿದು ಬರಬೇಕಿದೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.