ಅಂಕೋಲಾ: ಮನೆಯೊಂದರಲ್ಲಿ ಸಿಲಿಂಡರ್ ಗ್ಯಾಸ್ ಸ್ಪೋಟಿಸಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಗಾಯಗಳಾದ ಘಟನೆ ತಾಲೂಕಿನ ಕೇಣಿಯ ಗಾಂವಕರವಾಡದಲ್ಲಿ ನಡೆದಿದೆ. ಇಂದು ಮಧ್ಯಾಹ್ನ ದುರ್ಘಟನೆ ಸಂಭವಿಸಿದ್ದು ಮನೆಯಲ್ಲಿ ಸಿಲಿಂಡರ್ ಜೋಡಿಸುವ ವೇಳೆ ಬೆಂಕಿ ತಗುಲಿದೆ ಎನ್ನಲಾಗಿದೆ. ಈ ವೇಳೆ ಸಿಲಿಂಡರ್ ಜೋಡಿಸುತ್ತಿರುವ ಇಬ್ಬರು ವಯಸ್ಕರು ಮತ್ತು ಅದನ್ನು ಗಮನಿಸುತ್ತಿದ್ದ ಮಕ್ಕಳಿಬ್ಬರಿಗೂ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆಯ ನಂತರ ಹೆಚ್ಚಿನ ವಿವರಗಳು ತಿಳಿದು ಬರಬೇಕಿದೆ.