Flash News
Monday, August 31, 2026
Logo Flash News
Monday, August 31, 2026
Logo

ಅಂಕೋಲಾದಲ್ಲಿ ಮತ್ತೊಬ್ಬ ಯುವಕ ಆತ್ಮಹತ್ಯೆ?

January 09, 2026   |   Flash News

ಅಂಕೋಲಾ: ತಾಲೂಕಿನಲ್ಲಿ ಆತ್ಮಹತ್ಯೆಯ ಸರಣಿ ಮುಂದುವರಿಯುತ್ತಿದೆ. ಮೂರು ದಿನಗಳ ಹಿಂದೆ ಪಟ್ಟಣದ ಅಸ್ಲಗದ್ದೆಯ ಯುವಕನೋರ್ವ ಪ್ರೇಮ ವೈಫಲ್ಯದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ. ಅಲ್ಲೇ ಸಮೀಪದ ಗುಡ್ಡದ ಬಳಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶುಕ್ರವಾರ ಮುಂಜಾನೆ ಮತ್ತೊಂದು ಶವ ಪತ್ತೆಯಾಗಿದೆ. ಮೃತ ದೇಹವು ಕೊಳೆತ ಸ್ಥಿತಿಯಲ್ಲಿದ್ದು 4-5 ದಿನಗಳ ಹಿಂದೆ ಮೃತಪಟ್ಟಿರಬಹುದು ಎನ್ನಲಾಗಿದೆ. ಮೃತದೇಹವು ವಿಘಟನೆಯಾಗಿದ್ದು ಗುರುತು ಪತ್ತೆಯಾಗಿಲ್ಲ. ಮುಂಜಾನೆ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ತಾಲೂಕಿನಲ್ಲಿ ಹಿಂದಿನ ವರ್ಷವೂ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚಿದ್ದವು. ಹದಿಹರಿಯದ ಆತ್ಮಹತ್ಯೆ ಪ್ರಕರಣವು ಕಳವಳಕಾರಿಯಾಗಿದೆ. ಹೊಸ ವರ್ಷದ ಆರಂಭದಲ್ಲಿಯೇ ಮತ್ತೆ ಸಾವಿನ ಸರಣಿ ಮುಂದುವರಿಯುತ್ತಿದೆ. 

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.