Flash News
Monday, August 31, 2026
Logo Flash News
Monday, August 31, 2026
Logo
ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಾತಿ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಾತಿ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

January 20, 2026   |   Flash News

ಕಾರವಾರ: ಜಿಲ್ಲೆಯ ಬಹುದಶಕಗಳ ಬೇಡಿಕೆಯಾಗಿರುವ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ಕನಸು ನನಸಾಗಬಹುದೇ ಈಡೇರಬಹುದೇ? ಮುಖ್ಯಮಂತ್ರಿ ಸಿದ್ದರಾಮಯ್ಯನವರ ಟಿಪ್ಪಣಿಯೊಂದು ಹೊಸ ಭರವಸೆ ಹುಟ್ಟು ಹಾಕಿದೆ. 

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ಕಣಿವೆಯ ಹಳ್ಳಿಗಳು, ಪರ್ವತದ ಅಂಚಿನಲ್ಲಿ ನೆಲೆಗೊಂಡಿರುವ ಜನಸಮುದಾಯಗಳು ಹಾಗೂ ಸುತ್ತಮುತ್ತಲಿನ ಗ್ರಾಮೀಣ ನಿವಾಸಿಗಳ ಅನುಕೂಲಕ್ಕಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡಿಕೊಡುವಂತೆ ಕೋರಿದ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಅದಕ್ಕೆ ತಕ್ಕಂತೆ ಅಗತ್ಯ ಕ್ರಮಗಳು ಜರುಗಿದರೆ ಈ ಬಾರಿಯ ಮುಂಗಡಪತ್ರದಲ್ಲಿ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ ನಿರೀಕ್ಷಿಸಬಹುದು.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.