Flash News
Monday, August 31, 2026
Logo Flash News
Monday, August 31, 2026
Logo

ಉಗ್ರವಾದಿ ಚಟುವಟಿಕೆ: ಜಿಲ್ಲೆಯ ಸಯ್ಯದ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ.

January 22, 2026   |   Flash News

ಕಾರವಾರ/ದೆಹಲಿ:ಯುವಕರನ್ನು ತೀವ್ರವಾದದತ್ತ ಸೆಳೆಯುವ ಹಾಗೂ ಪಾಕ್ ಮೂಲದ ಉಗ್ರ ಸಂಘಟನೆ ಲಷ್ಕರೆ-ಎ-ತಯ್ಯಬಾಗೆ ಸೇರ್ಪಡೆಗೊಳಿಸುವ ಸಂಚು ರೂಪಿಸಿದ್ದ ಆರೋಪದಡಿ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯೊಬ್ಬನಿಗೆ ವಿಶೇಷ ಎನ್‌ಐಎ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆ ವಿಧಿಸಲ್ಪಟ್ಟ ಆರೋಪಿಯನ್ನು ಸಯ್ಯದ್ ಎಂ. ಇದ್ರಿಸ್ ಎಂದು ಗುರುತಿಸಲಾಗಿದ್ದು, ಭಾರತೀಯ ದಂಡ ಸಂಹಿತೆ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ನ್ಯಾಯಾಲಯ ತೀರ್ಪು ನೀಡಿದೆ. ಜೈಲು ಶಿಕ್ಷೆಯ ಜೊತೆಗೆ ಆರೋಪಿಗೆ 70 ಸಾವಿರ ರೂ. ದಂಡವನ್ನೂ ವಿಧಿಸಲಾಗಿದೆ. ಈ ಪ್ರಕರಣವು ಮೊದಲಿಗೆ 2020ರ ಏಪ್ರಿಲ್‌ನಲ್ಲಿ ಪಶ್ಚಿಮ ಬಂಗಾಳ ಪೊಲೀಸರಿಂದ ದಾಖಲಾಗಿದ್ದು, ನಂತರ ಹೆಚ್ಚಿನ ತನಿಖೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಹಸ್ತಾಂತರಿಸಲಾಗಿತ್ತು. ತನಿಖೆಯ ವೇಳೆ ಎನ್‌ಐಎ ಶಿರಸಿಯಲ್ಲಿ ಸಯ್ಯದ್ ಇದ್ರಿಸ್ ಹಾಗೂ ಜಮ್ಮು–ಕಾಶ್ಮೀರ ನಿವಾಸಿ ಅಲ್ತಾಫ್ ಅಹ್ಮದ್ ರಾಥೆರ್ ಎಂಬ ಆರೋಪಿಗಳನ್ನು ಬಂಧಿಸಿತ್ತು.ಎನ್‌ಐಎ ಆರೋಪದಂತೆ, ಈ ಇಬ್ಬರು ತಾನಿಯಾ ಪರ್ವೀನ್ ಎಂಬ ಮಹಿಳೆಯೊಂದಿಗೆ ಸೇರಿಕೊಂಡು ಪಶ್ಚಿಮ ಬಂಗಾಳದಲ್ಲಿ ಲಷ್ಕರೆ-ಎ-ತಯ್ಯಬಾ ಸಂಘಟನೆಯ ಘಟಕ ಸ್ಥಾಪಿಸಲು ಸಂಚು ರೂಪಿಸಿದ್ದರು. ಇದಕ್ಕೂ ಮುನ್ನ ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯ ಬದೂರಿಯಾ ಪ್ರದೇಶದಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ತಾನಿಯಾ ಪರ್ವೀನ್ ಅವರನ್ನು ಪೊಲೀಸರು ಬಂಧಿಸಿದ್ದರು. ಶೋಧದ ವೇಳೆ ಕಾನೂನುಬಾಹಿರ ಸಾಹಿತ್ಯ ಸೇರಿದಂತೆ ಹಲವು ಅಕ್ರಮ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ, ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಠಿಣ ಶಿಕ್ಷೆ ವಿಧಿಸಿದೆ

 

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.