ಕಾರವಾರ: ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅನಾಮಧೇಯ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸೋಮವಾರ ಬೆಳಿಗ್ಗೆ ಸುಮಾರು 08:25ಕ್ಕೆ ನ್ಯಾಯಾಲಯದ ಆಡಳಿತ ಕಚೇರಿಯ ಕಂಪ್ಯೂಟರ್ ವಿಭಾಗದ ಅಧಿಕೃತ ಇ-ಮೇಲ್ ವಿಳಾಸಕ್ಕೆ ಸಂದೇಶವೊಂದು ಬಂದಿದ್ದು, ಅದರಲ್ಲಿ ಮಧ್ಯಾಹ್ನ 12:15ರ ಒಳಗಾಗಿ ನ್ಯಾಯಾಲಯದ ಆವರಣದಲ್ಲಿರುವ ಎಲ್ಲರನ್ನೂ ಸ್ಥಳಾಂತರಿಸುವಂತೆ ಎಚ್ಚರಿಕೆ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಪೊಲೀಸ್ ಇಲಾಖೆಯು ತಕ್ಷಣವೇ ಕಾರ್ಯಪ್ರವೃತ್ತವಾಗಿ ನ್ಯಾಯಾಲಯದ ಆವರಣದಲ್ಲಿ ಬಿಗಿ ಭದ್ರತೆಯನ್ನು ಕೈಗೊಂಡಿದೆ. ಈ ಇ-ಮೇಲ್ ಅನ್ನು ಸುನ್ನಿಯಾ ದಾಸನ್ (sunniya_dasan@outlook.com) ಎಂಬ ಐಡಿಯಿಂದ ಕಳುಹಿಸಲಾಗಿದ್ದು, ಅದರಲ್ಲಿ 2021ರ ಅವಧಿಯ ಕೆಲವು ರಾಜಕೀಯ ಮತ್ತು ಮಾಧ್ಯಮ ಸಂಬಂಧಿತ ಗಂಭೀರ ಆರೋಪಗಳನ್ನು ಉಲ್ಲೇಖಿಸಲಾಗಿದೆ. ಅಷ್ಟೇ ಅಲ್ಲದೆ, ವಿವಿಧ ವ್ಯಕ್ತಿಗಳ ಹೆಸರುಗಳನ್ನು ಒಳಗೊಂಡ ಗೊಂದಲಕಾರಕ ಹಾಗೂ ಆಕ್ಷೇಪಾರ್ಹ ಹೇಳಿಕೆಗಳನ್ನು ಆ ಸಂದೇಶದಲ್ಲಿ ಸೇರಿಸಲಾಗಿದೆ. ಈ ಇ-ಮೇಲ್‌ನಲ್ಲಿರುವ ಅಂಶಗಳ ಸತ್ಯಾಸತ್ಯತೆಯ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಇಡೀ ನ್ಯಾಯಾಲಯ ಸಂಕೀರ್ಣವನ್ನು ಪರಿಶೀಲನೆಗೆ ಒಳಪಡಿಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಆವರಣದಲ್ಲಿದ್ದ ನ್ಯಾಯಾಧೀಶರು, ವಕೀಲರು ಹಾಗೂ ಸಿಬ್ಬಂದಿಯನ್ನು ತಕ್ಷಣವೇ ಸುರಕ್ಷಿತವಾಗಿ ಹೊರಕ್ಕೆ ಸ್ಥಳಾಂತರಿಸಲಾಯಿತು. ಈ ಘಟನೆಯ ಹಿನ್ನೆಲೆಯಲ್ಲಿ ಇಂದಿನ ಎಲ್ಲಾ ನ್ಯಾಯಾಲಯದ ಕಲಾಪಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಪೊಲೀಸರು ಇ-ಮೇಲ್‌ನ ಮೂಲ ಮತ್ತು ಇದರ ಹಿಂದಿರುವ ದುಷ್ಕರ್ಮಿಗಳ ಪತ್ತೆಗೆ ತೀವ್ರ ಶೋಧ ನಡೆಸುತ್ತಿದ್ದಾರೆ.
: ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅನಾಮಧೇಯ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸೋಮವಾರ ಬೆಳಿಗ್ಗೆ ಸುಮಾರು 08:25ಕ್ಕೆ ನ್ಯಾಯಾಲಯದ ಆಡಳಿತ ಕಚೇರಿಯ ಕಂಪ್ಯೂಟರ್ ವಿಭಾಗದ ಅಧಿಕೃತ ಇ-ಮೇಲ್ ವಿಳಾಸಕ್ಕೆ ಸಂದೇಶವೊಂದು ಬಂದಿದ್ದು, ಅದರಲ್ಲಿ ಮಧ್ಯಾಹ್ನ 12:15ರ ಒಳಗಾಗಿ ನ್ಯಾಯಾಲಯದ ಆವರಣದಲ್ಲಿರುವ ಎಲ್ಲರನ್ನೂ ಸ್ಥಳಾಂತರಿಸುವಂತೆ ಎಚ್ಚರಿಕೆ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಪೊಲೀಸ್ ಇಲಾಖೆಯು ತಕ್ಷಣವೇ ಕಾರ್ಯಪ್ರವೃತ್ತವಾಗಿ ನ್ಯಾಯಾಲಯದ ಆವರಣದಲ್ಲಿ ಬಿಗಿ ಭದ್ರತೆಯನ್ನು ಕೈಗೊಂಡಿದೆ. ಈ ಇ-ಮೇಲ್ ಅನ್ನು ಸುನ್ನಿಯಾ ದಾಸನ್ (sunniya_dasan@outlook.com) ಎಂಬ ಐಡಿಯಿಂದ ಕಳುಹಿಸಲಾಗಿದ್ದು, ಅದರಲ್ಲಿ 2021ರ ಅವಧಿಯ ಕೆಲವು ರಾಜಕೀಯ ಮತ್ತು ಮಾಧ್ಯಮ ಸಂಬಂಧಿತ ಗಂಭೀರ ಆರೋಪಗಳನ್ನು ಉಲ್ಲೇಖಿಸಲಾಗಿದೆ. ಅಷ್ಟೇ ಅಲ್ಲದೆ, ವಿವಿಧ ವ್ಯಕ್ತಿಗಳ ಹೆಸರುಗಳನ್ನು ಒಳಗೊಂಡ ಗೊಂದಲಕಾರಕ ಹಾಗೂ ಆಕ್ಷೇಪಾರ್ಹ ಹೇಳಿಕೆಗಳನ್ನು ಆ ಸಂದೇಶದಲ್ಲಿ ಸೇರಿಸಲಾಗಿದೆ. ಈ ಇ-ಮೇಲ್‌ನಲ್ಲಿರುವ ಅಂಶಗಳ ಸತ್ಯಾಸತ್ಯತೆಯ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದೆ.