Flash News
Monday, August 31, 2026
Logo Flash News
Monday, August 31, 2026
Logo
ಶಿವರಾತ್ರಿ ಹಿನ್ನೆಲೆ ಸಮುದ್ರಕ್ಕಿಳಿದ ಬಾಲಕ ಸಾವು

ಶಿವರಾತ್ರಿ ಹಿನ್ನೆಲೆ ಸಮುದ್ರಕ್ಕಿಳಿದ ಬಾಲಕ ಸಾವು

February 17, 2026   |   Flash News

ಕಾರವಾರ:ಶಿವರಾತ್ರಿ ಹಿನ್ನೆಲೆಯಲ್ಲಿ ಸಮುದ್ರಕ್ಕಿಳಿದ ಬಾಲಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ. ಗಾಂವಗೇರಿಯ ಯಶ್ ಶ್ಯಾಮ ಮಹಾಲೆ (17)ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಬಾಲಕ. ಶಿವರಾತ್ರಿ ಹಿನ್ನೆಲೆ ಮಾಜಾಳಿ ಬಳಿ ಸಮುದ್ರಕ್ಕೆ ರಾಮನಾಥ ಪರಿವಾರ ದೇವರು ಸೇರಿದಂತೆ ಸುತ್ತಮುತ್ತಲಿನ ದೇವರನ್ನು ಪಲ್ಲಕ್ಕಿಯಲ್ಲಿ ತಂದು ಸಮುದ್ರ ಸ್ನಾನ ಮಾಡಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಜನ ಸಮುದ್ರಕ್ಕೆ ಸ್ನಾನಕ್ಕೆಂದು ಆಗಮಿಸುತ್ತಾರೆ. ಈ ವೇಳೆ ಸ್ನಾನಕ್ಕಾಗಿ ಸಮುದ್ರಕ್ಕೆ ಇಳಿದ ಬಾಲ ಮುಳುಗಿ ಮೃತಪಟ್ಟಿದ್ದಾರೆ. ಚಿತ್ತಾಕುಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.