Flash News
Monday, August 31, 2026
Logo Flash News
Monday, August 31, 2026
Logo
ಸರಕಾರಿ ಕಾರ್ಯಕ್ರಮದ ಬ್ಯಾನರ್ ನಲ್ಲಿ ಶಾಸಕರ ಫೋಟೋ ನಾಪತ್ತೆ;

ಸರಕಾರಿ ಕಾರ್ಯಕ್ರಮದ ಬ್ಯಾನರ್ ನಲ್ಲಿ ಶಾಸಕರ ಫೋಟೋ ನಾಪತ್ತೆ;

July 28, 2025   |   Flash News

ಕಾರವಾರ: ಕರ್ನಾಟಕ ರಾಜ್ಯ ಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ವಲಯಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಪಟ್ಟಣದ ಖಾಸಗಿ ಹೋಟೆಲ್ ಒಂದರಲ್ಲಿ ಮಂಗಳವಾರ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದ ಬ್ಯಾನರ್ ನಲ್ಲಿ ಸ್ಥಳೀಯ ಶಾಸಕ ಸತೀಶ್ ಸೈಲ್ ಫೋಟೋ ಇಲ್ಲದಿರುವುದು ಅವರ ಅಭಿಮಾನಿಗಳನ್ನು ಕೆರಳಿಸಿದೆ. 
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರ ಭಾವಚಿತ್ರವನ್ನು ಬ್ಯಾನರ್ ನಲ್ಲಿ ಪ್ರಕಟಿಸಲಾಗಿದ್ದು ಪಟ್ಟಣದ ಹಲವು ಕಡೆಗಳಲ್ಲಿ ಬ್ಯಾನರ್ ತೂಗು ಹಾಕಲಾಗಿದೆ. ಆದರೆ ಸ್ಥಳೀಯ ಶಾಸಕರನ್ನು ಕಡೆಗಣಿಸಿದ್ದು, ಸರಿಯಲ್ಲ ಎಂದು ಅವರ ಅಭಿಮಾನಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.