Flash News
Monday, August 31, 2026
Logo Flash News
Monday, August 31, 2026
Logo

ಭಿಕ್ಷಾಟನೆಯಲ್ಲಿ ತೊಡಗಿದ್ದ ವ್ಯಕ್ತಿಯ ಮೇಲೆ ದೂರು

July 29, 2025   |   Flash News

ಅಂಕೋಲಾ: ಪಟ್ಟಣದ ವೆಂಕಟರಮಣ ದೇವಸ್ಥಾನದ ಸಾರ್ವಜನಿಕರ ರಸ್ತೆ ಬದಿಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿಕೊಂಡಿದ್ದ ವ್ಯಕ್ತಿಯೊಬ್ಬರ ಮೇಲೆ ಕರ್ನಾಟಕ ಭಿಕ್ಷಾಟನಾ ಅಧಿನಿಯಮ 1975ರ ಅನ್ವಯ ಕಾನೂನು ಕ್ರಮ ಜರುಗಿಸುವಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. 
ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ಕರ್ನಾಟಕ ಬಿಕ್ಷಾಟನಾ ಅಧಿನಿಯಮ 1975ರ ಕಲಂ 11ನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಂಬಂಧ ಬಿಕ್ಷಾಟನೆ ವಿರುದ್ಧ ವಿಶೇಷ ಕಾರ್ಯಚರಣೆ ನಡೆಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಸೂಚನೆಯಂತೆ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಇತರೆ ಪಂಚರನ್ನು ಸೇರಿಸಿಕೊಂಡು ಪೊಲೀಸ್ ಇಲಾಖೆಯ ವಾಹನದಲ್ಲಿ ಸಂಚರಣೆ ಮಾಡುತ್ತಿರುವಾಗ ಕಂಡು ಬಂದ ಭಿಕ್ಷುಕರೋರ್ವರ ಮೇಲೆ ಪಿಎಸ್ಐ ಉದ್ದಪ್ಪ ಧರೆಪ್ಪನವರ ಪ್ರಕರಣ ದಾಖಲಿಸಿದ್ದಾರೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.