ಕಾರವಾರ: ತಾಲ್ಲೂಕಿನ ಬಿಣಗಾ ನೇವಲ್ ಕಾಮತ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗೋವಾದಿಂದ ಕೇರಳದ ಕಡೆಗೆ ಚಲಿಸುತ್ತಿದ್ದ ಕಾರು ಅಂಕೋಲಾದಿಂದ ಕಾರವಾರದ ಕಡೆಗೆ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನದಿಂದ ಕೆಳಕ್ಕೆ ಬಿದ್ದ ಸವಾರ ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.