ಕಾರವಾರ: ಬೇಲೆಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅವರ ಸದಾಶಿವಗಡದಲ್ಲಿರುವ ಮನೆ ಮೇಲೆ ಬುಧವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ಸಮಯದಲ್ಲಿ ಶಾಸಕರು ಮನೆಯಲ್ಲಿ ಇರಲಿಲ್ಲ. ಅವರು ವಿಧಾನಸಭೆ ಅಧಿವೇಶನಕ್ಕಾಗಿ ಬೆಂಗಳೂರಿಗೆ ತೆರಳಿದ್ದರು.
ನಾಲ್ಕೈದು ಕಾರುಗಳಲ್ಲಿ ಬಂದ ಇಡಿ ಅಧಿಕಾರಿಗಳ ತಂಡವು ಶಾಸಕರ ಮನೆಯನ್ನು ಶೋಧಿಸಿದ್ದು, ಮನೆಯ ಹೊರಗಡೆ ಸಿಐಎಸ್‌ಎಫ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.